ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ
ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಜು. 27 ಆಗಿದ್ದು, ಬೆಂಗಳೂರು ನಿರ್ಮಾಷ್ಟರಾಗಿ, ಬೆಂಗಳೂರು ಇಂದು ವಿಶ್ವದ ಜಾಗತಿಕ ಮಟ್ಟದಲ್ಲಿ ಗುರುತಿಸಲು ಕಾರಣರಾದ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಸುಳ್ಯ ಗೌಡರ ಯುವ ಸೇವಾ ಸಂಘವು ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಸಹಕಾರದೊಂದಿಗೆ ಸುಳ್ಯದಲ್ಲಿ ಜುಲಾಯಿ 12 ಶನಿವಾರದಂದು ಶ್ರೀ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಪತ್ರಿಕಾ ಹೇಳಿಕೆಯಲ್ಲಿ

ಸುಳ್ಯ ಭಾಗದ ಅದೆಷ್ಟೋ ಸಮಾಜದ ಕುಟುಂಬದ ಮಕ್ಕಳು ಇಂದು ಬೆಂಗಳೂರಿನಲ್ಲಿ ವಾಸ್ತವ್ಯವಿದ್ದು, ವಿವಿಧ ಉದ್ಯೋಗ ಮಾಡುತ್ತಿದ್ದಾರೆ. ಅವರ ದುಡಿತದಿಂದ ನಮ್ಮ ಸಮಾಜದ ಅದೆಷ್ಟೋ ಕುಟುಂಬಗಳು ಆರ್ಥಿಕವಾಗಿ ಮುಂದುವರಿಯುತ್ತಿದೆ. ಈ ನಿಟ್ಟಿನಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯ ಪ್ರಯುಕ್ತ ಸುಳ್ಯದಲ್ಲಿ ವಿವಿಧ ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಾಡನ್ನು ಕಟ್ಟುತ್ತಿರುವ ಹಿರಿಯರಾದ ಸಹಕಾರಿರತ್ನ ನಿತ್ಯಾನಂದ ಮುಂಡೋಡಿಯವರಿಗೆ 2025ರ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದೇವೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ| ರೇಣುಕಾಪ್ರಸಾದ್ ಕೆ. ವಿ. ಮಾಡಲಿದ್ದು, ಹಿರಿಯ ಸಹಕಾರಿ ಪಿ. ಸಿ. ಜಯರಾಮರವರು ಕೆಂಪೇಗೌಡರವರ ಬಗ್ಗೆ ಉಪನ್ಯಾಸ ಹಾಗೂ ನಿತ್ಯಾನಂದ ಮುಂಡೋಡಿಯವರ ಬಗ್ಗೆ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಇನ್ನೋರ್ವ ಹಿರಿಯ ಸಹಕಾರಿ ಜಾಕೆ ಮಾಧವ ಗೌಡರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಮ್ಮ ತಾಲೂಕು ಗೌಡ ಯುವ ಸೇವಾ ಸಂಘ ಮತ್ತು ಮಹಿಳಾ ಘಟಕ, ತರುಣ ಘಟಕ ಹಾಗೂ ಗ್ರಾಮ ಸಮಿತಿಗಳು ಈ ಕಾರ್ಯಕ್ರಮ ಸಂಘಟನೆ ಮಾಡಲಿದ್ದು, ಸಮಾಜದ ಅಭಿಮಾನಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿದ್ದಾರೆ.