ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ವತಿಯಿಂದ ಬೆಂಗಳೂರಿನ ವೈಟ್ ಫೀಲ್ಡ್ ಕೈಗಾರಿಕಾ ವಲಯದಲ್ಲಿ ಜು.5 ರಂದು ನಡೆಯಿತು.
ಕೈಗಾರಿಕಾ ಲೋವೆಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪೆನಿಯ ಹಣಕಾಸು ವಿಭಾಗದ ಹಿರಿಯ ನಿರ್ದೇಶಕರಾದ ಸುಬ್ಬರಾಮು ಟಿ ವಿ ರವರು “ಹಣಕಾಸಿನೇತರ ಉದ್ದೇಶಗಳಿಗಾಗಿ ಹಣಕಾಸು” ಎಂಬ ವಿಷಯದ ಬಗ್ಗೆ ತರಬೇತಿ ನೀಡಿದರು.

ಕ್ರೆಸೆಂಟ್ ಕನ್ಸಲ್ಟೆಂಟ್ ನ ವ್ಯವಸ್ಥಾಪಕ ನಿರ್ದೇಶಕರಾದ ಇಸ್ಮಾಯಿಲ್ ಜರ ರವರು “ಮನೋವೃತ್ತಿ (Positive Attitude)” ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ಮಾಹಿತಿ ನೀಡಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ,ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಇದರ ಅಧ್ಯಕ್ಷ ಹಾಗೂ ಫಾರ್ಮೆಡ್ ಲಿಮಿಟೆಡ್ ಸಂಸ್ಥೆಯ ಮಾನವ ಸಂಪನ್ಮೂಲ, ತರಬೇತಿ ಹಾಗೂ ಆಡಳಿತ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆಯವರು ಅಧ್ಯಕ್ಷತೆಯನ್ನು ವಹಿಸಿ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಪರಿಚಯಿಸಿದರು.
ಈ ಸಂದರ್ಭದಲ್ಲಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕರಾದ ಇಸಾಕ್ ಯಾಕುಬ್ ಮತ್ತು ರವಿಕುಮಾರ್ ರವರು ಶ್ರೀ ಸುಬ್ಬರಾಮು ರವರನ್ನು ಗೌರವಿಸಿದರು.















ಉಮ್ರಾ ಯಾತ್ರೆಯೊಂದಿಗೆ ಸೌದಿ ಅರೇಬಿಯಾ ಪ್ರವಾಸವನ್ನು ಕೈಗೊಳ್ಳಲಿರುವ ಇಸ್ಮಾಯಿಲ್ ಜರ ರವರನ್ನು ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಇಸ್ಮಾಯಿಲ್ ಜರ ರವರು ಸ್ವಾಗತಿಸಿ, ರವಿಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳಾದ ಕೃಷ್ಣಮೂರ್ತಿ, ಅರವಿಂದ್, ಚೆಲುವರಾಜು, ಹರೀಶ್, ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಮಂಜುನಾಥ್ ಆರ್ ಹಿರಿಯೂರು ಹಾಗೂ ರಕ್ಷಿತ್ ಸಂಯೋಜಿಸಿ ಕಾರ್ಯಕ್ರಮ ನಿರೂಪಿಸಿದರು.










