ಜುಲೈ 14 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

0

ಭಾರತೀಯ ಮಜ್ದೂರ್ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳುಗಾರಿಕೆಗೆ ಸಂಬಂಧಪಟ್ಟ ಇಲಾಖೆಯು ಕಾನೂನಿನ ನಿಯಮಗಳನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಇದನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಸಾವಿರಾರು ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಿ ಎಷ್ಟೇ ಪರಿಪರಿಯಾಗಿ ಕೇಳಿಕೊಂಡರೂ ಕೂಡ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ಜುಲೈ ೧೪ ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿಗೆ ಸಂಬಂಧಪಟ್ಟಂತೆ ಎಲ್ಲಾ ಸಂಘಟನೆಗಳು ಜಂಟಿಯಾಗಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ನಿರ್ಧರಿಸಿದೆ.

ಜು. ೬ ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಸಭೆ ನಡೆದು ಅಲ್ಲಿ ತೀರ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮಧುಸೂದನ್ ರವರು ಮಾತನಾಡಿ ‘ಈ ನಮ್ಮ ಪ್ರತಿಭಟನೆ ರಾಜ್ಯಾದ್ಯಂತ ಸದ್ದು ಮಾಡಬೇಕು ಅದರೊಂದಿಗೆ ಇಲಾಖೆಯ ಈಗಿನ ಕಾನೂನು ನಿಯಮಗಳಿಂದ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಮರಳು ಹಾಗೂ ಕೆಂಪು ಕಲ್ಲು ಮತ್ತೆ ಕಾನೂನು ರೀತಿಯಲ್ಲಿ ತೆಗೆಯಲು ಅವಕಾಶಗಳು ದೊರಕಬೇಕು.

ಕಷ್ಟದಲ್ಲಿರುವ ಸಾವಿರಾರು ಕುಟುಂಬಗಳು ಸಮಸ್ಯೆಗಳಿಂದ ಹೊರ ಬರಬೇಕು ಎಂದು ಅವರು ಹೇಳಿದರು.

ಲಾರಿ ಮತ್ತು ಕೆಂಪು ಕಲ್ಲು ಸಂಘದ ಅಧ್ಯಕ್ಷ ಪ್ರಕಾಶ್ ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಇಂಡಸ್ಟ್ರಿಯಲ್ ಸಂಘದ ನಾಗೇಶ್ ರವರು ಈ ಸಂದರ್ಭದಲ್ಲಿ ಮಾತನಾಡಿ ಮಜ್ದೂರ್ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಗೆ ಸಂಪೂರ್ಣವಾದ ಬೆಂಬಲ ಹಾಗೂ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ನಾವೆಲ್ಲರು ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಮನೋಹರ, ಕೋಶಾಧಿಕಾರಿ ಕಿಟ್ಟಣ್ಣ ರೈ ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ಸದಸ್ಯರುಗಳು ಪದಾಧಿಕಾರಿಗಳು ಭಾಗವಹಿಸಿದ್ದರು.