ದ.ಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ)ಸಮಿತಿ ಸದಸ್ಯರಾಗಿ ಶ್ರೀಮತಿ ಪೂರ್ಣಿಮಾ ಸೂಂತೋಡು

0

ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ಸದಸ್ಯರಾಗಿ ಉಬರಡ್ಕ ಮಿತ್ತೂರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂ0ತೋಡು ನೇಮಕಗೊಂಡಿದ್ದಾರೆ.

ಉಬರಡ್ಕ ಮಿತ್ತೂರು ಗ್ರಾ.ಪಂ ಅಧ್ಯಕ್ಷೆಯಾಗಿ ಕಳೆದ 2 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರು ಅಪ್ಪಯ್ಯ ಸುಂತೋಡುರವರ ಪತ್ನಿ.

ಸಂಸದ ಕ್ಯಾ.ಬ್ರಿಜೇಶ್ ಚೌಟ ಅಧ್ಯಕ್ಷರಾಗಿರುವ ಈ ಸಮಿತಿಯ ಮೊದಲ ಸಭೆ ಜು.8 ರಂದು ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.