ಅಧ್ಯಕ್ಷರಾಗಿ ಸುಧಾಕರ ಪಲ್ಲತಡ್ಕ, ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್ ಆಯ್ಕೆ
ಅಜ್ಜಾವರ ಗ್ರಾಮದ ಮೇನಾಲ ಶ್ರೀಕೃಷ್ಣ ಭಜನಾ ಮಂದಿರ ಇದರ ವತಿಯಿಂದ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಚರಣೆಯ ಕುರಿತ ಸಭೆಯು ಜು -6ರಂದು ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಆಗಸ್ಟ್ -15, 2025ರಂದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಸುಧಾಕರ ಪಲ್ಲತಡ್ಕ, ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್, ಕೋಶಾಧಿಕಾರಿಯಾಗಿ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಆಯ್ಕೆಯಾದರು.
















ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷರಾದ ಬಾಲಕೃಷ್ಣ ಪಿ ಎಸ್ ವಹಿಸಿದ್ದರು.
ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಇದರ ಸುಳ್ಯ ಪ್ರಖಂಡ ದ ಕಾರ್ಯದರ್ಶಿ ನವೀನ್ ಎಲಿಮಲೆ, ಸುಳ್ಯ ಸಿ ಎ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸುಭೋದ್ ಶೆಟ್ಟಿ ಮೇನಾಲ, ಭಜನಾ ಮಂದಿರದ ಕಾರ್ಯದರ್ಶಿ ದಿವಿತ ನಯನ್ ರೈ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಬೇಬಿ ಸುಕುಮಾರ್ ಉಪಸ್ಥಿತರಿದ್ದರು. ಬಾಲಕೃಷ್ಣ ಮೇನಾಲ ಸ್ವಾಗತಿಸಿ, ಪ್ರಬೋಧ್ ಶೆಟ್ಟಿ ವಂದಿಸಿದರು.










