ಜು. 8 (ನಾಳೆ) : ಸುಳ್ಯದಲ್ಲಿ ಕೆಸರುಗದ್ದೆ ದಸರಾ ಕ್ರೀಡೋತ್ಸವ ಹಾಗೂ ದಸರಾದ ಪೂರ್ವ ತಯಾರಿಯ ಬಗ್ಗೆ ಪೂರ್ವಭಾವಿ ಸಭೆ

0

ಶ್ರೀ ಶಾರದಾಂಬ ಉತ್ಸವ ಸಮಿತಿ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಸೇವಾ ಟ್ರಸ್ಟ್ ಮತ್ತು ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಸುಳ್ಯ ದಸರಾ ಕಾರ್ಯಕ್ರಮದ ಆಯೋಜನೆ ಮತ್ತು ಜು. 20 ರಂದು ಕೆಸರುಗದ್ದೆ ದಸರಾ ಕ್ರೀಡೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಚರ್ಚಿಸಲು ಶ್ರೀ ಶಾರದಾಂಬಾ ಸಮೂಹ ಸಮಿತಿಗಳ ಹಾಗೂ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಭೆ ಜು. 8 ರಂದು ಮಂಗಳವಾರ ಅಪರಾಹ್ನ 4.30ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಪ್ರಮುಖರು ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.