ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ. ಸಮಿತಿ ಅಧ್ಯಕ್ಷರು ಉಪ ಮುಖ್ಯಮಂತ್ರಿ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ರವರನ್ನು ಜು.08 ರಂದು ಅವರ ಮನೆಯಲ್ಲಿ ಭೇಟಿ ಮಾಡಿದರು.

ಭೇಟಿ ನೀಡಿದ ಅವರು ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದವನ್ನು ಉಪಮುಖ್ಯಮಂತ್ರಿಯವರಿಗೆ ನೀಡಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಎಂ.ವೆಂಕಪ್ಪ ಗೌಡ ಮೊದಲಾದವರು ಜೊತೆಗಿದ್ದರು.