ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ವರ್ಗಾವಣೆಗೊಂಡಿರುವ ದ್ವಿತೀಯ ದರ್ಜೆ ಸಹಾಯಕ ವಿಜೇತ್ ಎಂ ಸಿ ಇವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ ಜು. 5ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಪುರುಷೋತ್ತಮ ಸುಳ್ಳಿ ವಹಿಸಿದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ರವರು ವರ್ಗಾವಣೆಗೊಂಡಿರುವ ವಿಜೇತ್ ಎಂ ಸಿ ರನ್ನು ಅಭಿನಂದಿಸಿದರು.

ಅಜ್ಜಾವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಿನಾಥ ಎಂ ಅಭಿನಂದನಾ ಭಾಷಣ ಮಾಡಿದರು.















ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮಲತಾ ದಿನೇಶ್ ಕೇರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ದಯಾನಂದ ಎನ್ ಕೆ, ಚಂದ್ರಶೇಖರ ಪೇರಾಲು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಯು ಎಸ್, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು ಕೆ, ಸಂಪನ್ಮೂಲ ವ್ಯಕ್ತಿ ಸುಂದರ್ ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕ ಕಿಶೋರ್ ಕುಮಾರ್ ಯು ವಿ, ಎಸ್ ಡಿ ಎಂ ಸಿ ಯು ಮಾಜಿ ಅಧ್ಯಕ್ಷ ಪುರುಷೋತ್ತಮ ಕಜೆ ಮತ್ತು ಧನಂಜಯ ಬಾಳೆತೋಟ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ, ದೇವಚಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆರೆಮೂಲೆ, ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಯ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು , ಶಾಲಾ ವಿದ್ಯಾರ್ಥಿ ನಾಯಕಿ ಮಾನ್ಯ ಕೆ ಡಿ ಉಪಸ್ಥಿತರಿದ್ದರು.
ಈ ಸಂದರ್ಭ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗ, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದ್ವಿತೀಯ ದರ್ಜೆ ಸಹಾಯಕರಾದ ವಿಜೇತ್ ಎಂ ಸಿ ಇವರು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಡಿಸೆಂಬರ್ 31, 2012 ರಿಂದ ಜೂನ್ 16, 2025 ವರೆಗೆ ಸುಮಾರು 13 ವರ್ಷಗಳ ಕಾಲ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿದ್ದು, ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇಲ್ಲಿಗೆ ವರ್ಗಾವಣೆಗೊಂಡಿರುವರು.
ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕಿ ಕು.ಸಂಗೀತ ಸಿ ವಿ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಮುರಳೀಧರ ಪಿ ಜೆ ಕಾರ್ಯಕ್ರಮ ನಿರೂಪಿಸಿದರು.










