














ಪೆರಾಜೆಯಲ್ಲಿ ಬೈಕ್ ಸ್ಕಿಡ್ಡಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಐವರ್ನಾಡಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು.10 ರಂದು ನಡೆದಿದೆ.
ಜು.3 ರಂದು ನಿಡುಬೆ ಸಿ.ಆರ್.ಸಿ.62 ಕಾಲನಿಯ ಗೋಪಿನಾಥ್ ಎಂಬವರು ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಬೈಕಲ್ಲಿ ಹೋಗುತ್ತಿರುವಾಗ ಪೆರಾಜೆಯಲ್ಲಿ ಬೈಕ್ ಸ್ಕಿಡ್ಡಾಗಿ ಬಿದ್ದು ಗಾಯಗೊಂಡಿದ್ದರು.
ಗಾಯಗೊಂಡ ಇವರನ್ನು ತಕ್ಷಣ ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ತಾಯಿ,ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.










