ಜು.14 : ಐವರ್ನಾಡಿನಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

0

ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು.14 ರಂದು ಸೋಮವಾರ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಲಿದೆ.
ಅಂಚೆ ಜನ ಸಂಪರ್ಕ ಅಭಿಯಾನ ಅಂಚೆ ಇಲಾಖೆಯ ವಿವಿಧ ವಿಮಾ ಯೋಜನೆಗಳ ಮಾಹಿತಿ ಮತ್ತು ನೋಂದಣಿ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಇ ಕೆವೈಸಿ ಆಗದೇ ಉಳಿದಿರುವ ಫಲಾನುಭವಿಗಳ ಇ ಕೆವೈಸಿ ಮಾಡಲಾಗುವುದು.
ಆದ್ದರಿಂದ ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.