








ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದಿಂದ ವಿನೂತನ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು ಸುಳ್ಯ ತಾಲೂಕಿನ ವಿವಿಧ ಪ್ರೌಢಶಾಲೆ ಪದವಿ ಪೂರ್ವ ವಿದ್ಯಾಲಯಗಳ ಸಹಕಾರದೊಂದಿಗೆ ಪರಿಸರ ಜಾಗೃತಿಯಾನ- ಪರಿಸರ ಗೀತೆ ಗಾಯನ ಹಾಗೂ ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಜುಲೈ 14 ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿದೆ
ಜು. 14ರಂದು ಪೂ.9:45 ಕ್ಕೆ ಸರ್ಕಾರಿ ಪದವಿ ಪೂರ್ವ ವಿದ್ಯಾಲಯ ಹಾಗೂ ಪ್ರೌಢಶಾಲಾ ವಿಭಾಗ ಸುಳ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್ ಕೆ ನಾಯರ್
ಉದ್ಘಾಟಿಸಲಿದ್ದಾರೆ. ಜು.16ರಂದು ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೂ. 10 ಗಂಟೆಗೆ,ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅ.2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಜು. 17ರಂದು ಪೂ.10 ಗಂಟೆಗೆ ರೋಟರಿ ಪದವಿಪೂರ್ವ ವಿದ್ಯಾಲಯ ಮಿತ್ತಡ್ಕ ಸುಳ್ಯದಲ್ಲಿ, ಅ. 2ಕ್ಕೆ ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಲಿದೆ.ಜು.18ರಂದು ಪೂ. 10 ಗಂಟೆಗೆ ಬಾಳಿಲವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ, ಜು.19ರಂದು ಪೂ. 10 ಗಂಟೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆಯಲಿದೆ. ಜು. 22ರಂದು ಪೂ.10 ಗಂಟೆಗೆ ಸ್ನೇಹ ಪ್ರೌಢಶಾಲೆ ಸುಳ್ಯದಲ್ಲಿ, ಅ.2 ಗಂಟೆಗೆ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಜು. 23ರಂದು ಪೂ.10 ಗಂಟೆಗೆ ಸುಳ್ಯದ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಸಮಾರೋಪ ಸಮಾರಂಭ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿದ್ದು, ಖ್ಯಾತ ಪರಿಸರವಾದಿ ದಿನೇಶ್ ಹೊಳ್ಳ ಉಪನ್ಯಾಸ ನೀಡಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ಹಲವು ಮಂದಿ ಸಂಪನ್ಮೂಲ ವ್ಯಕ್ತಿಗಳು, ಅತಿಥಿಗಳು ಭಾಗವಹಿಸಲಿದ್ದಾರೆ. ಪ್ರತಿ ಶಾಲೆಗಳಲ್ಲಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಕಸಾಪ ತಾಲೂಕ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ತಿಳಿಸಿದ್ದಾರೆ.










