ಸುಳ್ಯ ತಾ. ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

0

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ಇಂದು ಎ ಪಿ ಎಂ ಸಿ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ತಾಲೂಕು ಪಂಚಾಯತ್ ನ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಾಜಣ್ಣ ಸ್ಪರ್ಧಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ದಯಾನಂದ ಕೊರತೋಡಿ ಸ್ವಾಗತಿಸಿ, ಪುಷ್ಪರಾಜ್ ಶೆಟ್ಟಿ ವಂದಿಸಿದರು. ಮಿಥುನ್ ಕರ್ಲಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.