ಜು. 14: ಬೆಳ್ಳಾರೆ ಜೆ.ಡಿ. ಆಡಿಟೋರಿಯಂನಲ್ಲಿ ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗದ ಪದಗ್ರಹಣ ಕಾರ್ಯಕ್ರಮ

0

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ 2025-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು. 14ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಸಂಜೆ 7 ಗಂಟೆಯಿಂದ ನಡೆಯಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ 317 D ಇದರ ಪ್ರಥಮ ಜಿಲ್ಲಾ ಉಪಾಧ್ಯಕ್ಷ ಹೆಚ್.ಎಂ. ತಾರಾನಾಥ PMJF ಭಾಗವಹಿಸಿದ್ದಾರೆ ಎಂದು ಕ್ಲಬ್‌ನ ಅಧ್ಯಕ್ಷೆ ಲ. ಉಷಾ ಬಿ. ಭಟ್, ಕಾರ್ಯದರ್ಶಿ ಲ. ಚೇತನ್ ಡಿ. ಶೆಟ್ಟಿ ಮತ್ತು ಕೋಶಾಧಿಕಾರಿ ಈಶ್ವರ ವಾರಣಾಶಿ ತಿಳಿಸಿದ್ದಾರೆ. ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲ. ಯತೀಶ್ ಭಂಡಾರಿ, ಕಾರ್ಯದರ್ಶಿಯಾಗಿ ಲ. ಚೇತನ್ ಡಿ. ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ ಲ. ಎಂ.ಕೆ ಶೆಟ್ಟಿಯವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.