ಜನಸಂಖ್ಯೆ ನಿಯಂತ್ರಣವು ರಾಷ್ಟ್ರದ ಅಭಿವೃದ್ಧಿಗೆ ಪೂರಕ : ಶಾಸಕಿ ಭಾಗೀರಥಿ ಮುರುಳ್ಯ
ಜನಸಂಖ್ಯೆ ಅಧಿಕತೆಗೆ ಕಾರಣ ಏನು ಎಂದು ಚಿಂತನೆ ಮಾಡಬೇಕು.
ನಿಯಂತ್ರಣಕ್ಕಾಗಿ ಸರಕಾರವು ಕುಟುಂಬ ಕಲ್ಯಾಣ ಯೋಜನೆ ಅನ್ವಯ ಅನೇಕ ಕಾರ್ಯಕ್ರಮ ಆಯೋಜಿಸಿದೆ.ಇದರ ಬಗ್ಗೆ ತಿಳಿದುಕೊಳ್ಳಬೇಕು.ಆರೋಗ್ಯ ಕಾರ್ಯಕರ್ತರು ಮನೆಗೆ ಬಂದಾಗ ಅವರಿಗೆ ಸ್ಪಂಧನೆ ನೀಡುವುದು ಅತ್ಯಗತ್ಯ.ಜನಸಂಖ್ಯೆ ಹೆಚ್ಚಳದಿಂದ ಸಮಸ್ಯೆ ಉಂಟಾಗುತ್ತದೆ.ಆರ್ಥಿಕ ಹಿನ್ನಡೆ ಮತ್ತು ಬಡತನ ಇತ್ಯಾದಿ ತೊಂದರೆಗಳು ಬರುತ್ತದೆ.
ಮುಂದೆ ಭವಿಷ್ಯದಲ್ಲಿ ಜನಸಂಖ್ಯಾ ನಿಯಂತ್ರಣ ಕ್ಕೆ ಬೇಕಾದ ಕ್ರಮಗಳ ಬಗ್ಗೆ ಹೆಚ್ಚಿನ ಗಮನ ನೀಡುವುದು ಅತ್ಯಗತ್ಯ.ಜನಸಂಖ್ಯೆ ನಿಯಂತ್ರಣ ರಾಷ್ಟ್ರದ ಅಭಿವೃದ್ಧಿ ಗೆ ಪೂರಕವಾಗಿರುತ್ತದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ತಾಲೂಕು ಪಂಚಾಯತ್ ಸುಳ್ಯ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸುಳ್ಯ, ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.








ಗೌರವಾರ್ಪಣೆ:
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಿದರು.ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕಾಂತರಾಜು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಸಮಾರಂಭದಲ್ಲಿ ಆರೋಗ್ಯ ಸುರಕ್ಷಾಧಿಕಾರಿಗಳನ್ನು, ಆಶಾಕಾರ್ಯಕರ್ತರನ್ನು,ಆರೋಗ್ಯ ಸಿಬ್ಬಂದಿಗಳನ್ನು, ಪ್ರಥಮ ದರ್ಜೆ ಸಹಾಯಕ ಅರುಣೋದಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ,
ತಾಲೂಕು ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ, ಎಸ್. ಎಸ್. ಪಿ.ಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ಜಯಪ್ರಕಾಶ್. ಆರ್, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಪ್ರೊ.ಕೆ.ಆರ್.ಶೆಟ್ಟಿಗಾರ್,ಪಂಜ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ,
ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ಮುಖ್ಯ ಅತಿಥಿಗಳಾಗಿದ್ದರು.
ರೋಟರಿ ಅಧ್ಯಕ್ಷ ಜಯಪ್ರಕಾಶ್. ಆರ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರುತಿ ಅಶ್ವಥ್ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ವಂದಿಸಿದರು.










