














ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಯೋಜನೆ ಶಕ್ತಿ ಯೋಜನೆಯು ಮಹಿಳೆಯರ ಪಾಲಿಗೆ ವರದಾನವಾಗಿದೆ. ಈಗಾಗಲೇ ಸುಮಾರು 500 ಕೋಟಿಗೂ ಮಿಕ್ಕಿ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡಿರುತ್ತಾರೆ. ಮುಖ್ಯ ಮಂತ್ರಿ ಸಿದ್ಧರಾಮಯ್ಯ ರವರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ವಿಜಯೋತ್ಸವದ ಅಂಗವಾಗಿ ಬಸ್ಸು ನಿಲ್ದಾಣದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರು ಅಭಿನಂದನೆ ಸಲ್ಲಿಸಿದರು.










