ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು.14 ರಂದು ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಿತು.
ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು.















ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿ ಮಾತನಾಡಿದರು.
ಸುಳ್ಯ ಅಂಚೆ ಪಾಲಕರಾದ ಮೋಹನರವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸುಳ್ಯ ಅಂಚೆ ಮೇಲ್ವಿಚಾರಕರಾದ ರಮೇಶ್,ಬಾಬು ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಸಹಕಾರಿ ಸಂಘದ ಉಪಾಧ್ಯಕ್ಷ ಮಹೇಶ ಜಬಳೆ,ಶಾಂತರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ.ಎಚ್.ಸ್ವಾಗತಿಸಿ,ವಂದಿಸಿದರು.
ಅಂಚೆ ಜನ ಸಂಪರ್ಕ ಅಭಿಯಾನ ಅಂಚೆ ಇಲಾಖೆಯ ವಿವಿಧ ವಿಮಾ ಯೋಜನೆಗಳ ಮಾಹಿತಿ ಮತ್ತು ನೋಂದಣಿ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಇ ಕೆವೈಸಿ ಆಗದೇ ಉಳಿದಿರುವ ಫಲಾನುಭವಿಗಳ ಕೆವೈಸಿ ಮಾಡಲಾಯಿತು.
ನೂರಾರು ಜನರು ಇದರ ಸದುಪಯೋಗಪಡಿಸಿಕೊಂಡರು.










