ಚೊಕ್ಕಾಡಿ ವಿದ್ಯಾ ಸಂಸ್ಥೆಯ ಸ್ಥಾಪನಾ ದಿನಾಚರಣೆ

0

ಅಕ್ಷಯ್ ಕೆ.ಸಿ.ಯವರಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಪುರಸ್ಕಾರ

ಚೊಕ್ಕಾಡಿ ವಿದ್ಯಾ ಸಂಸ್ಥೆಯ 53 ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು.14 ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ, ಮಾಜಿ ಸಚಿವರಾದ ಎಸ್. ಅಂಗಾರ ರವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಯವರು ಸಾಧಕ ವಿದ್ಯಾರ್ಥಿಗಳನ್ನು ‌ಪುರಸ್ಕರಿಸಿ”ವಿದ್ಯಾರ್ಥಿಗಳಲ್ಲಿ ಅಭಿರುಚಿ ಬೆಳೆಯಬೇಕಾದರೆ ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು.ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪೂರೈಸಿದ ಬಳಿಕ ಮರಳಿ ಊರಿಗೆ ಬಂದ ನಂತರ ಅಭಿವೃದ್ಧಿಯಕಾರ್ಯದಲ್ಲಿ ತೊಡಗಿಸಿಕೊಳ್ಳುವಿಕೆ ಅತೀ ಅಗತ್ಯ ಎಂದು ಅವರು ಕರೆ ನೀಡಿದರು.

ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಆಡಳಿತ ಮಂಡಳಿಯ ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಎಂ.,ಅಮರ ಮುಡ್ನೂರು ಪಂಚಾಯತ್ ಸದಸ್ಯರಾದಕೃಷ್ಣಪ್ರಸಾದ್ ಮಾಡಬಾಕಿಲು, ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಭವ್ಯ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಶಿಕ್ಷಕ ಹರಿಪ್ರಸಾದ ಕೆ ಕಾರ್ಯಕ್ರಮ ನಿರೂಪಿಸಿದರು.
ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಶಾಲಾ ಹಿರಿಯ ಶಿಕ್ಷಕರು, ಪೋಷಕರು, ವಿದ್ಯಾಭಿಮಾನಿಗಳು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.