ಇನ್ನರ್ ವೀಲ್ ಕ್ಲಬ್ ಸುಳ್ಯ: ಪೋಷಣ್ ಅಭಿಯಾನ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಇನ್ನರ್ ವೀಲ್ ಕ್ಲಬ್ ಸುಳ್ಯದ ವತಿಯಿಂದ ಬೂಡು ಅಂಗನವಾಡಿ ಕೇಂದ್ರ, ಕೇರ್ಪಳ ದಲ್ಲಿ ಪೋಷಣ್ ಅಭಿಯಾನ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಡಾ. ಸಾಯಿಗೀತಾ ಜ್ಞಾನೇಶ್ ಅವರು ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ, ಆಹಾರ ಪದ್ಧತಿ ಹಾಗೂ ಸ್ವಚ್ಛತೆಯ ಮಹತ್ವವನ್ನು ವಿವರಿಸಿದರು. ಅವರು ಸರಿಯಾದ ಆಹಾರ ಸೇವನೆಯ ಅಗತ್ಯತೆ, ಅಪಾಯಕಾರಿ ಆಹಾರ ಪದ್ಧತಿಗಳ ದುಷ್ಪರಿಣಾಮಗಳು ಹಾಗೂ ದಿನನಿತ್ಯದ ನೈರ್ಮಲ್ಯದ ನಿಯಮಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಡಾ. ಸವಿತಾ ಸಿ. ಕೆ ಹೊದ್ದೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಅಂತ್ಯದಲ್ಲಿ ಕ್ಲಬ್ ಕಾರ್ಯದರ್ಶಿ ಮತ್ತು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಡಾ. ಪ್ರಜ್ಞಾ ಎಂ.ಆರ್ ವಂದನಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಿಕಟ ಪೂರ್ವಧ್ಯಕ್ಷೆ ಶ್ರೀಮತಿ ಚಿಂತನಾ ಸುಬ್ರಮಣ್ಯ, ಇನ್ನರ್ ವೀಲ್ ಸದಸ್ಯೆಯರಾದ ಸೌಮ್ಯ ರವಿಪ್ರಸಾದ್, ಸವಿತಾ ನಾರ್ಕೋಡು, ಲತಾ ರೈ, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.ಕಾರ್ಯಕ್ರಮ ದಲ್ಲಿ ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ಪೋಷನ್ ಪೌಡರ್ ವಿತರಿಸಲಾಯಿತು