ಕನಕಮಜಲು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಪ್ರಯುಕ್ತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಆ. 3 ರಂದು ನಡೆಯಲಿದ್ದು, ಆ ಪ್ರಯುಕ್ತ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2024- 25 ನೇ ಸಾಲಿನ ವಾರ್ಷಿಕ ಮಹಾಸಭೆಯ ಪ್ರಯುಕ್ತ ಎಸ್.ಎಸ್‌.ಎಲ್.ಸಿ.ಮತ್ತು ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುವುದು.ಅರ್ಹ ವಿದ್ಯಾರ್ಥಿಗಳು ಜುಲೈ 25ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆಧಾರ್ ಪ್ರತಿ, ಮಾರ್ಕ್ಸ್ ಕಾರ್ಡ್ ನ ಪ್ರತಿ ಸಲ್ಲಿಸಬೇಕೆಂದು ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಂತಿಸಿದ್ದಾರೆ.