ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ















ಸುಳ್ಯ ತಾಲ್ಲೂಕು ಕಾಯ೯ನಿರತ ಪತ್ರಕತ೯ರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜುಲೈ 22 ರಂದು ಸುಳ್ಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಯ೯ದಶಿ೯ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಕಾಯ೯ಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಲೋಕೇಶ್ ಪೆಲ೯ಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಗುವುದು. ತಾಲ್ಲೂಕು ಪಂಚಾಯಿತಿ ಕಾರ್ಯ ನಿವ೯ಹಣಾಧಿಕಾರಿ ರಾಜಣ್ಣ ಸನ್ಮಾನ ಮಾಡಲಿದ್ದಾರೆ. ವಿಜಯ ಕರ್ನಾಟಕ ದೈನಿಕದ ಹಿರಿಯ ಉಪ ಸಂಪಾದಕ ಆರ್.ಸಿ ಭಟ್ ಉಪನ್ಯಾಸ ನೀಡಲಿದ್ದಾರೆ. ದ.ಕ.ಜಿಲ್ಲಾ ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.










