ಬ್ಯಾಂಕ್ ಆಫ್ ಬರೋಡಾ ಸಂಸ್ಥಾಪನಾ ದಿನದ ಪ್ರಯುಕ್ತ ಬೊಳುಬೈಲು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಣೆ

0

ಬ್ಯಾಂಕ್ ಆಫ್ ಬರೋಡಾ ಸುಳ್ಯ ಶಾಖೆ ಇದರ ವತಿಯಿಂದ ಬ್ಯಾಂಕಿನ 118 ನೇ ವರ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಬೊಳುಬೈಲು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ಹಾಗೂ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ಜು. 18 ರಂದು ನಡೆಯಿತು.

ಬ್ಯಾಂಕ್ ಆಫ್ ಬರೋಡಾ ಸುಳ್ಯ ಶಾಖೆಯ ಉಪ ಶಾಖಾ ವ್ಯವಸ್ಥಾಪಕಿ ಶ್ರೀಮತಿ ಲೀನಾರವರು ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು.

ಜಾಲ್ಸೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡ ಸುಳ್ಯ ಶಾಖೆಯ ಹೆಡ್ ಕ್ಯಾಶಿಯರ್ ಶ್ರೀಮತಿ ಸುಪ್ರೀತಾ, ಜಾಲ್ಸೂರು ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಸದಸ್ಯರಾದ ಶ್ರೀಮತಿ ಸುಮತಿ ದಿವಾಕರ ಹುಲಿಮನೆ, ಗಣೇಶ್ ರೈ ಕುಕ್ಕoದೂರು, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನೇತ್ರಾವತಿ ಉಪಸ್ಥಿತರಿದ್ದರು.

ಇದೇ ಸಂದರ್ಭ ಪ್ರಸನ್ನ ಕುಮಾರಿ ನೆಕ್ರಾಜೆಯವರು ಮಕ್ಕಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಕೊಡುಗೆಯಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬೇಬಿ ವಂದಿಸಿದರು.