














ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಂಜೂರಾದ ಪ್ರಸಾದಂ ಯೋಜನೆಯ ಬಗ್ಗೆ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟರನ್ನು ನಿಯೋಗ ಭೇಟಿ ಮಾಡಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿ.ಪ.ಸದಸ್ಯರಾದ ಹರೀಶ್ ಕಂಜಿಪಿಲಿ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ , ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ ದಯಾನಂದ ಕುರುಂಜಿ ಹಾಗೂ ತೊಡಿಕಾನ ದೇವಸ್ಥಾನದ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.










