ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ,
ಕುಲಶೇಖರ, ಮಂಗಳೂರು ಇವರ ಕೊಡ ಮಾಡುವ 2024-25 ಸಾಲಿನಲ್ಲಿ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ ಪಂಜ ಹಾಲು ಉತ್ಪಾದಕರ ಸಹಕಾರ ಸಂಘ ಪಡೆದಿದೆ. ಜು.18 ರಂದು ಸುಳ್ಯದ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿಗಳ ಸಮಾಲೋಚನಾ ಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು .








ಪಂಜ ಹಾಲು ಉತ್ಪಾದಕರ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ
ಭಾಸ್ಕರ ನಾಯಕ್ ಬೇರ್ಯ ಮತ್ತು
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದರ್ಶ ಚಿದ್ಗಲ್ಲು ಪ್ರಶಸ್ತಿಯೊಂದಿಗೆ ಸನ್ಮಾನ ಸ್ವೀಕರಿಸಿದರು.ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ,ನಿರ್ದೇಶಕರಾದ ಶ್ರೀಮತಿ ಸವಿತಾ ಯನ್ ಶೆಟ್ಟಿ, ಪ್ರಭಾಕರ ಅರಂಬೋಡಿ, ಎಸ್ ಬಿ ಜಯರಾಮ ರೈ, ಚಂದ್ರಶೇಖರ ರಾವ್ , ಭರತ್ ನೆಕ್ರಾಜೆ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿರಾಜ್ ಉಡುಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.










