ಪಂಜ ಪರಿಸರದ 2025 ನೇ ಸಾಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯು ಅಗಸ್ಟ್ 27, 28, 29 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.18.ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರು ಪ್ರಸಾದ್ ತೋಟ ರವರ ಸಭಾಧ್ಯಕ್ಷತೆಯಲ್ಲಿ ನಡೆಯಿತು.









ಗಣೇಶೋತ್ಸವ ಸಮಿತಿಯ ಪೂರ್ವಾಧ್ಯಕ್ಷ ಗಂಗಾಧರ ಗೌಡ ಗುಂಡಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಪಂಜ ಸಾರ್ವಜನಿಕ ಆರಾಧನಾ ಸಮಿತಿಯ ಗೌರವಾಧ್ಯಕ್ಷ ಮಾಧವ ಗೌಡ ಜಾಕೆ, ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು , ಕಾರ್ಯದರ್ಶಿ ಜಯರಾಮ ಕಲ್ಲಾಜೆ, , ಗಣೆಶೋತ್ಸವ ಸಮಿತಿ ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ, ಖಜಾಂಜಿ ಜನಾರ್ದನ ನಾಗತೀರ್ಥ
ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಯರಾಮ ಕಲ್ಲಾಜೆ ಸ್ವಾಗತಿಸಿದರು.ಜೀವನ್ ಶೆಟ್ಟಿಗದ್ದೆ ವಂದಿಸಿದರು.










