














ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ವಾರ್ಷಿಕ ಮಹಾಸಭೆ,ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮವು ಜು.27 ರಂದು ಸುಳ್ಯ ಶ್ರೀರಾಮಪೇಟೆಯ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಹರಿಶ್ಚಂದ್ರ ಯಂ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಜಯಪ್ರಕಾಶ್ ಕೆ, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ,ನ್ಯಾಯವಾದಿ ಹಾಗೂ ಗೌರವ ಕಾನೂನು ಸಲಹೆಗಾರರಾದ ದಿನೇಶ್ ಮಡಪ್ಪಾಡಿ ಉಪಸ್ಥಿತರಿರುವರು.
7ನೇ ತರಗತಿ,10 ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.










