














ಬಂಟ್ವಾಳ ತಾಲ್ಲೂಕು ಮಂಚಿಯ ರಮೇಶ್ ಪ್ರಭು ಎಂಬವರು 2019 ರಲ್ಲಿ ಮರದ ಕೊಂಬೆಗಳನ್ನು ಕತ್ತರಿಸುವಾಗ ಮರದಿಂದ ಬಿದ್ದು ಸೊಂಟದಿಂದ ಕೆಳಗಿನ ದೇಹದ ಕೆಳಭಾಗದಲ್ಲಿ ಸಂವೇದನೆಯನ್ನು ಕಳೆದುಕೊಂಡಿದ್ದಾರೆ.
ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನೋವು ಹೆಚ್ಚಾದ ಕಾರಣ, ವೈದ್ಯರು ಮತ್ತೊಂದು ಶಸ್ತ್ರಚಿಕಿತ್ಸೆ ಅಗತ್ಯವೆಂದು ಸೂಚಿಸಿದ್ದಾರೆ. ಇವರು ತುಂಬಾ ಬಡ ಕುಟುಂಬದವರಾಗಿದ್ದು ಶಸ್ತ್ರಚಿಕಿತ್ಸೆಗೆ ಸುಮಾರು 6 ರಿಂದ 7 ಲಕ್ಷ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಇಷ್ಟು ದೊಡ್ಡ ಮೊತ್ತವನ್ನು ಭರಿಸಲಾಗದ ಕಾರಣ, ಇವರ ಶಸ್ತ್ರಚಿಕಿತ್ಸೆಗೆ ದಾನಿಗಳು ಧನ ಸಹಾಯ ನೀಡಿ ಚಿಕಿತ್ಸೆಗೆ ಸಹಕರಿಸಬೇಕೆಂದು ಅವರು ವಿನಂತಿಸಿದ್ದಾರೆ.










