ಮುಂದಿನ ತಲೆಮಾರಿಗೆ ಸ್ಚಚ್ಚ ಪರಿಸರ ನಿರ್ಮಿಸುವ ಕಾರ್ಯ ನಮ್ಮ ಮುಂದಿದೆ : ಡಾ.ನರೇಂದ್ರ ರೈ ದೇರ್ಲ

ನಾವು ಸೇವಿಸುವ ಆಹಾರ, ಕುಡಿಯುವ ನೀರು, ಉಸಿರಾಡುವ ಗಾಳಿ ಮಲಿನವಾಗುತ್ತಿದೆ ಹೀಗಾದಲ್ಲಿ ಆಕ್ಸಿಜನ್ ನ್ನು ಬಾಟಲಿಯಲ್ಲಿ ತುಂಬಿಸಿಕೊಂಡು ಹೋಗುವ ದಿನ ದೂರವಿಲ್ಲ.ಮುಂದಿನ ತಲೆಮಾರಿಗೆ ಸ್ವಚ್ಚ ಪರಿಸರ ನಿರ್ಮಿಸುವ ಕಾರ್ಯವನ್ನು ನಾವು ಮಾಡಬೇಕು.ಎಂದು ಸಾಹಿತಿಗಳು ಮತ್ತು ನಿವೃತ್ತ ಪ್ರಾಧ್ಯಾಪಕರಾದ ಡಾ.ನರೇಂದ್ರ ರೈ ದೇರ್ಲ ಹೇಳಿದರು.








ಅವರು ಇಂದು ( ಜು.19)ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ವತಿಯಿಂದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗ ಮತ್ತು ಇಕೋ ಕ್ಲಬ್ ನ ಸಹಯೋಗದಲ್ಲಿ ನಡೆದ ಪರಿಸರ ಜಾಗೃತಿಯಾನ – ಪರಿಸರ ಗೀತೆ ಗಾಯನ, ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಪಿಎಸ್ ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕೆ.ಪಿ.ಎಸ್.ಪ್ರಾಂಶುಪಾಲರಾದ ಜನಾರ್ಧನ ಕೆ.ಯನ್., ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ. ಭಾಗವಹಿಸಿದ್ದರು. ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಇಕೋ ಕ್ಲಬ್ ಸಂಚಾಲಕಿ ಆಶಾಕುಮಾರಿ ಉಪಸ್ಥಿತರಿದ್ದರು. ಗಾಯಕಿ ಶ್ರೀಮತಿ ಸಂಧ್ಯಾ ಮಂಡೆಕೋಲು ಪರಿಸರ ಗೀತೆ ಗಾಯನ ಮಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ನಿರ್ದೇಶಕ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿದರು. ಗೌ.ಕಾರ್ಯದರ್ಶಿ ತೇಜಸ್ವಿ ಕಡಪಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಕೋ ಕ್ಲಬ್ ಸಂಚಾಲಕಿ ಆಶಾ ಕುಮಾರಿ ವಂದಿಸಿದರು. ಕಸಾಪ ನಿರ್ದೇಶಕ, ಕಾರ್ಯಕ್ರಮ ಸಂಯೋಜಕ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.










