ನಿವೃತ್ತ ಅಧ್ಯಾಪಕ ಕಾಪಿಲ ದುಗ್ಗಪ್ಪ ಗೌಡರಿಂದ ಪಯಸ್ವಿನಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಐಡಿ ಕಾರ್ಡ್ ವಿತರಣೆ

0

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಿವೃತ್ತ ಅಧ್ಯಾಪಕ ಕಾಪಿಲ ದುಗ್ಗಪ್ಪ ಗೌಡರು ನೀಡಿದ ಸಮವಸ್ತ್ರ ಮತ್ತು ಐಡಿ ಕಾರ್ಡ್ ವಿತರಣಾ ಕಾರ್ಯಕ್ರಮ ಜು. 19ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಂಚಾಲಕ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಯಕ್ಷಗಾನ ಗುರು ಐತಪ್ಪ ಕಾನಾವು, ಎಸ್ ಡಿ ಎಂ ಸಿ ಅಧ್ಯಕ್ಷ ಚಂದ್ರಶೇಖರ ಕೆ., ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲತಾ ಉಪಸ್ಥಿತರಿದ್ದರು.

ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭಗೊಳ್ಳಲಿದ್ದು, ಅದು ಕೂಡ ಉದ್ಘಾಟನೆಗೊಂಡಿತು. ಮಕ್ಕಳಿಗೆ ಐಡಿ ಕಾರ್ಡ್ ವಿತರಣೆ ನಡೆಯಿತು.

ದುಗ್ಗಪ್ಪ ಮಾಸ್ಟರ್ ಅವರ ಮಕ್ಕಳಾದ ಸತೀಶ್ ಮತ್ತು ಶರ್ಮಿಳರವರು ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಪಯಸ್ವಿನಿ ಶಾಲೆಯ ಹಿರಿಯ ವಿದ್ಯಾರ್ಥಿಗಳಾಗಿದ್ದಾರೆ. ಇದೇ ಸಂದರ್ಭ ದುಗ್ಗಪ್ಪ ಗೌಡರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ಶಿಕ್ಷಕಿ ಮೀನಾಕುಮಾರಿ ಸ್ವಾಗತಿಸಿ, ಶ್ರೀಮತಿ ಸವಿತಾಕುಮಾರಿ ವಂದಿಸಿದರು. ಶಿವಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.