ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರಕಾರದಿಂದ ಉಚಿತ ಲ್ಯಾಪ್ ಟ್ಯಾಪ್ ಕೊಡುಗೆ

0

ಅಭಿನಂದನೆ ಸಲ್ಲಿಸಿದ ಮಹಿಳಾ ಬ್ಲಾಕ್ ಅಧ್ಯಕ್ಷೆ ಗೀತಾ ಕೋಲ್ಚಾರ್

ತಾಲೂಕಿನ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಾಧಿಕಾರಿಗಳಿಗೆ ಉಚಿತವಾಗಿ ಲ್ಯಾಪ್ ಟ್ಯಾಪ್ ನ್ನು ಕೊಡುಗೆ ಯಾಗಿ ನೀಡಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಕೆಲವು ಗ್ರಾಮದಲ್ಲಿ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ. ಕಂದಾಯ ಸಚಿವರಾದ ಕೃಷ್ಣೆ ಬೈರೇಗೌಡರವರು ಕ್ಯಾಬಿನೆಟ್ ಸಭೆಯಲ್ಲಿ
ಈ ವಿಷಯವನ್ನು ಪ್ರಸ್ತಾಪಿಸಿದ್ದು ಅದರಂತೆ ಅವರ ಶಿಫಾರಸ್ಸಿನ ಮೇರೆಗೆ ಗ್ರಾಮದ ಎಲ್ಲಾ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ಕೊಡುಗೆ ಲಭಿಸಿದೆ.


ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 33 ಮಂದಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಈಗಾಗಲೇ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ ಎಂದು ಸುಳ್ಯಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಯ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.