ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ತೋಟತೊಳಿಲಾಲರ ಸಂಘದ ಅಧ್ಯಕ್ಷ ಐವರ್ನಾಡಿನ ಚಂದ್ರಲಿಂಗಂರವರು ಇದೀಗ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು.















ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಗಾಗ ಡಯಾಲಿಸಿಸ್ ಆಗುತ್ತಿತ್ತು. ಆದರೂ ಕಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ನಿನ್ನೆ ಐವರ್ನಾಡಿನಲ್ಲಿ ತೋಟ ತೊಳಿಲಾಲರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯಲ್ಲಿರುವಾಗಲೇ ಲೋ ಬಿ.ಪಿ.ಗೊಳಗಾಗಿ ಅಸ್ವಸ್ಥಗೊಂಡರು.
ಕೂಡಲೇ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮೈಸೂರಿನ ಅಪೋಲೊ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಇಂದು ವೆಂಟಿಲೇಶನ್ ನಲ್ಲಿರಿಸಲಾಗಿತ್ತು. ಇಂದು ಸಂಜೆ ಅವರು ಕೊನೆಯುಸಿರೆಳೆದರು.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.










