ಅಮೈಮಡಿಯಾರು ಸ.ಹಿ.ಪ್ರಾ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ವತಿಯಿಂದ 7ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶೌಚಾಲಯವನ್ನು ಶಾಸಕಿ ಕು| ಭಾಗೀರಥಿ ಮುರುಳ್ಯ ಇವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಸೂಂತೋಡು, ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ ಪಾಲಡ್ಕ, ಸದಸ್ಯರಾದ ಶ್ರೀ ಸಂದೀಪ್ ಕುತ್ತಮೊಟ್ಟೆ, ಪ್ರಶಾಂತ ಪಾನತ್ತಿಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ, ನ್ಯಾಯವಾದಿ ಶ್ಯಾಂ ಪಾನತ್ತಿಲ, ಸಂದೀಪ್ ಮದುವೆಗದ್ದೆ, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ವಿಜಯಕುಮಾರ ಉಬರಡ್ಕ, ಊರಿನ ಗಣ್ಯರಾದ ಅಪ್ಪಯ್ಯ ಸೂಂತೋಡು, ಮೆರೈನ್ ಇಂಜಿನಿಯರ್ ಗಿರೀಶ್ ಪಾಲಡ್ಕ, ಓಂ ಪ್ರಕಾಶ್ ನಾರ್ಕೋಡು, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮತ್ತು ಉಪಾಧ್ಯಕ್ಷರಾದ ಶುಭಲತಾ ಶೆಟ್ಟಿಮಜಲು ಹಾಗೂ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಮತ್ತು ಶಾಲಾ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಶಾಲೆಗೆ ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ನ ಕೊಡುಗೆಗಳಿಗಾಗಿ ಟ್ರಸ್ಟ್ ನ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಹಾಗೂ ಶೌಚಾಲಯ ನಿರ್ಮಾಣದಲ್ಲಿ ಸಹಕರಿಸಿದ ಮನೀಶ್ ಸೂಂತೋಡು ಇವರನ್ನು ಗೌರವಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರಾಮಕ್ಕ.ಯು ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಶ್ರೀಮತಿ ಶಶಿರೇಖಾ, ಪ್ರವೀಣ.ಎಸ್.ಎನ್, ಕು| ಭಾಗೀರಥಿ ಮತ್ತು ಎಸ್.ಡಿಎಂ.ಸಿ ಯ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

























