ಎಂ.ಎ. ಕನ್ನಡ ಸ್ನಾತಕೋತ್ತರ ಪರೀಕ್ಷೆಯಲ್ಲಿ ಶಾಂತಕುಮಾರಿ ಮುಳ್ಯರಿಗೆ ಡಿಸ್ಟಿಂಕ್ಷನ್

0

ಮೈಸೂರು ಮುಕ್ತ ವಿಶ್ವವಿದ್ಯಾನಿಲಯ ನಡೆಸಿದ ಎಮ್. ಎ ಕನ್ನಡ ಸ್ನಾತಕೋತ್ತರ ಪರೀಕ್ಷೆಯಲ್ಲಿ ಶಾಂತಕುಮಾರಿ ಮುಳ್ಯ ಉರಿಕ್ಯಾಡಿಯವರು
ಶೇಕಡ 80 ಅಂಕ ಗಳಿಸಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಯಾಗಿರುತ್ತಾರೆ.

ಶಾಂತಕುಮಾರಿಯವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ರಾಜ್ಯಶಾಸ್ತ್ರ ಸ್ನಾತಕೋತ್ತರ ಪರೀಕ್ಷೆಯಲ್ಲಿ ಮೂರನೆಯ ರ್ಯಾಂಕ್ ಪಡೆದಿರುತ್ತಾರೆ. ಹಾಗೂ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಪದವಿಯನ್ನು ಪಡೆದಿರುತ್ತಾರೆ.

ಪ್ರಸ್ತುತ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗುತ್ತಿಗಾರಿನಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.. ಇವರು ಮುಳ್ಯ ಉರಿಕ್ಯಾಡಿ ಶೇಷಪ್ಪಗೌಡ ಮತ್ತು ಕಮಲಾಕ್ಷಿ ದಂಪತಿಯ ಪುತ್ರಿ.