ಇಲ್ಲಿ ಕಾಣುವುದು ಬಿಡಿಸಿದ ಚಿತ್ರವಲ್ಲ

0

ಬೆಳ್ಳಾರೆಯ ರಸ್ತೆಯಲ್ಲಿರುವ ಹೊಂಡ ಗುಂಡಿಗಳು

ವಾಹನ ಸಂಚಾರಕ್ಕೆ ಕಾಡುತ್ತಿರುವ ಸಮಸ್ಯೆ

ಐವರ್ನಾಡಿನಿಂದ ಬೆಳ್ಳಾರೆ ಕಡೆಗೆ ಹೋಗುವ ಮುಖ್ಯ ರಸ್ತೆ ಬರೀ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರು ಸಂಚರಿಸಲು ಸವಾಲುಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ಬೃಹತ್ ವಾಹನಗಳು ಅಲ್ಲದೆ ದ್ವಿಚಕ್ರ ವಾಹನಕ್ಕೂ ಸಂಚರಿಸಲು ಕಷ್ಟ ಸಾಧ್ಯವಾಗಿದೆ. ರಸ್ತೆಯ ಪರಿಸ್ಥಿತಿಯನ್ನು ನೋಡಿ ಸವಾರರು ಮಾಧ್ಯಮಗಳಿಗೆ ತಮ್ಮ ನೋವನ್ನು ಹಂಚಿಕೊಳ್ಳುತ್ತಿದ್ದು, ಕನಿಷ್ಠ ಪಕ್ಷ ರಸ್ತೆಯ ಗುಂಡಿಗಳಿಗೆ ತಾತ್ಕಾಲಿಕ ವ್ಯವಸ್ಥೆಯನ್ನಾದರು ಕಲ್ಪಿಸಿಕೊಡಬೇಕೆಂದು ಆಗ್ರಹಿಸುತ್ತಿದ್ದಾರೆ.

ಆದ್ದರಿಂದ ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕಾಗಿರುವುದು ಅಗತ್ಯವಾಗಿದೆ.