ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ರೂ. ಐದು ಲಕ್ಷ ಚೆಕ್ ಹಸ್ತಾಂತರ

0

ಇತ್ತೀಚೆಗೆ ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ ಮೊತ್ತದ ಹಣವನ್ನು ಡಿ ಸಿ ಸಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ಸಿಬ್ಬಂದಿ ವರ್ಗದವರ ಮುಖಂತರ ದ. ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರಿರತ್ನ ಚಂದ್ರ ಕೋಲ್ಚಾರ್ ರವರಿಗೆ ಪುತ್ತೂರು ಪ್ರಧಾನ ಕಚೇರಿಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದ. ಕ. ಜೇನು ವ್ಯವಸಾಯಗಾರರ ಸಂಘದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಜಯಾನಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.