ಅಧ್ಯಕ್ಷರಾಗಿ ಶಶಿಗೌಡ ಕೊಯಿಂಗೋಡಿ ಪುನರಾಯ್ಕೆ
ಸೌತ್ ಕೆನರಾ ಫೊಟೋಗ್ರಾಫರ್‍ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. ೨೨ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ವಲಯ ಅಧ್ಯಕ್ಷರಾದ ಶಶಿಗೌಡ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯದ ಸ್ಥಾಪಕಾಧ್ಯಕ್ಷರಾದ ಗೋಪಾಲ್ ಸುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ, ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ, ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಕಲಾಶ್ರೀ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಜಿಲ್ಲಾ ವಲಯದ ಕಟ್ಟಡ ಸಮಿತಿ ಸದಸ್ಯರಾದ ಲೋಕೇಶ್ ಸುಬ್ರಹ್ಮಣ್ಯ, ವಲಯದ ಮಾಜಿ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ವಲಯದ ಕಾರ್ಯದರ್ಶಿ ದಿನೇಶ್ ಏನೆಕಲ್ಲು, ಖಜಾಂಜಿ ವೆಂಕಟೇಶ್ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ವಲಯದ ಸದಸ್ಯರ ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಘದ ಸದಸ್ಯರನ್ನು ಸಭೆಯಲ್ಲಿ ಗುರುತಿಸಿ ಗೌರವಿಸಲಾಯಿತು.















ನೂತನವಾಗಿ ವಿವಾಹವಾದ ಸಂಘದ ಸದಸ್ಯರನ್ನು ಅಭಿನಂದಿಸಲಾಯಿತು. ಹಾಗೂ ಸಂಘಕ್ಕೆ ಸೇರ್ಪಡೆಗೊಂಡ ಸದಸ್ಯರನ್ನು ಸ್ವಾಗತಿಸಲಾಯಿತು. ಸಂಘದ ಸದಸ್ಯರಾಗಿದ್ದು, ರಕ್ತದಾನ ಮಾಡುತ್ತಿರುವ ದಾನಿಗಳನ್ನು ಗುರುತಿಸಲಾಯಿತು. ಸಂಘದ ಸದಸ್ಯರಿಗೆ ಆರೋಗ್ಯ ವಿಮೆಯನ್ನು ಸಂಘದ ವತಿಯಿಂದ ಮಾಡುವ ಕುರಿತು ಚರ್ಚಿಸಲಾಯಿತು. ಹಾಗೂ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕೋಶಾಧಿಕಾರಿ ನವೀನ್ ರೈ ಪಂಜಳರನ್ನು ಸನ್ಮಾನಿಸಲಾಯಿತು.
ನೂತನ ಪದಾಧಿಕಾರಿಗಳು :
ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇದೇ ಸಂದರ್ಭದಲ್ಲಿ ನಡೆಯಿತು. ಅಧ್ಯಕ್ಷರಾಗಿ ಶಶಿ ಗೌಡ ಕೊಯಿಂಗೋಡಿ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೆ.ಜಿ., ಕೋಶಾಧಿಕಾರಿಯಾಗಿ ಶ್ರೀಮತಿ ವಸಂತಿ ಹರೀಶ್ ಆಯ್ಕೆಯಾದರು. ಕರುಣಾಕರ ಎಣ್ಣೆಮಜಲು ಸ್ವಾಗತಿಸಿದರು. ವಸಂತಿ ಹರೀಶ್ ರಾವ್ ವಂದಿಸಿದರು.










