ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ದುಡಿಯೋಣ: ಶಾಸಕಿ ಭಾಗೀರಥಿ ಮುರುಳ್ಯ
ಹಿರಿಯರ ಪರಿಶ್ರಮ ತ್ಯಾಗ ಬಲಿದಾನದಿಂದ ಭಾರತೀಯ ಜನತಾ ಪಾರ್ಟಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಹಿರಿಯರು ಕಟ್ಟಿ ಬೆಳೆಸಿದ ಈ ಪಕ್ಷವನ್ನು ನಿರಂತರ ಕಾರ್ಯ ಚಟುವಟಿಕೆಯಿಂದ ಮುನ್ನಡೆಸೋಣ. ಹುದ್ದೆ ಯಾವತ್ತು ಶಾಶ್ವತವಲ್ಲ ಪಕ್ಷದ ಸಾಮಾನ್ಯ ಕಾರ್ಯಕರ್ತರಾ ಗಿ ದುಡಿಯೋಣ ಹಿರಿಯರು ಆಚರಿಸುತಿದ್ದ ಆಚರಣೆಗಳನ್ನು ಉಳಿಸುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾದ ಕಾರ್ಯನಿರ್ವಹಣಾ ತಂಡದ ಸಭೆ ಮತ್ತು ಆಟಿದ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ನುಡಿದರು.
ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಡಾ ಮಂಜುಳಾ ರಾವ್ ಮಾತನಾಡಿ ನಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಕೆಲಸವನ್ನು ಮಾಡುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಶಕ್ತಿ ತುಂಬವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ನುಡಿದರು•















ಸುಳ್ಯ ಮಂಡಲದ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು•
ಮಂಡಲದ ಕಾರ್ಯದರ್ಶಿಯಾದ ಶ್ರೀಮತಿ ಭಾರತಿ ಪುರುಷೋತ್ತಮ್ ಇವರು ಆಟಿಕೂಟದ ಮಹತ್ವವನ್ನು ತಿಳಿಸಿದರು ಮತ್ತು ಆಟಿ ತಿಂಗಳ ವಿಶೇಷ ತಿನಿಸುಗಳನ್ನು ಸೇವಿಸುವ ಮೂಲಕ ಆಟಿದ ಕೂಟ ಕಾರ್ಯಕ್ರಮವನ್ನು ನಡೆಸಲಾಯಿತು•
ವೇದಿಕೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಲಕಿತಾ ಶೆಟ್ಟಿ, ಹಾಗೂ ಶ್ರೀಮತಿ ಸಂಧ್ಯಾ ವೆಂಕಟೇಶ್, ಮಂಡಲದ ಜಿಲ್ಲಾ ಪ್ರಭಾರಿಯಾದ ಯಶಸ್ವಿನಿ ಶಾಸ್ತ್ರಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಜಿಲ್ಲೆಯ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾದ ಶ್ರೀಮತಿ ಜಾನ್ಹವಿ ಕಾಂಚೋಡು, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವಿನಯ ಕಂದಡ್ಕ ಉಪಸ್ಥಿತರಿದ್ದರು. ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು•
ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಹೇಮಾ ಮೋಹನ್ ದಾಸ್ ಪ್ರಾರ್ಥಿಸಿ,, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಶಶಿಕಲಾ ಎ.ಸ್ವಾಗತಿಸಿದರು• ಮಂಡಲದ ಕಾರ್ಯದರ್ಶಿಯಾದ ಆಶಾ ರೈ ಕಲಾಯಿ ಕಾರ್ಯಕ್ರಮ ನಿರೂಪಿಸಿದರು• ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷಿ ಧನ್ಯವಾದ ನೀಡಿದರು.










