ಜು.26 : ಹರಿಹರ ಪಲ್ಲತಡ್ಕದಲ್ಲಿ ಅನಂತರಾಮ ಮಣಿಯಾನಮನೆಯವರಿಗೆ ಬೀಳ್ಕೊಡುಗೆ, ನಿವೃತ್ತರಿಗೆ ಸನ್ಮಾನ

0

ಕೊಲ್ಲಮೊಗ್ರು ಹರಿಹರ ಪ್ರಾ.ಕೃ ಪ‌ಸ. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ ಮನೆ
ಅವರಿಗೆ ಬೀಳ್ಕೊಡುಗೆ ಮತ್ತು ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಜು. 26 ರಂದು ಹರಿಹರೇಶ್ವರ ಕಲಾಮಂದಿರದಲ್ಲಿ ನೆರವೇರಲಿದೆ.‌ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾl ಸೋಮಶೇಖರ ಕಟ್ಟೆಮನೆ ವಹಿಸಲಿದ್ದಾರೆ. ಸನ್ಮಾನ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಕುಂಞೆಟ್ಟಿ ಉದ್ಘಾಟಿಸಲಿದ್ದಾರೆ. ಹಿರಿಯ ವೈದ್ಯರಾದ ಡಾ.ಚಂದ್ರಶೇಖರ ಕಿರಿಭಾಗ ಅವರು ನಿವೃತ್ತರನ್ನು ಸನ್ಮಾನಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಪ್ರಭಾಕರ ಕಿರಿಬಾಗ ಅವರು ಅಭಿನಂದನ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೂ ಭಾಗವಹಿಸಲಿದ್ದಾರೆ.