ಅಡ್ಡಾದಿಡ್ಡಿ ಬೈಕ್ ಓಡಿಸಿದ ಯುವಕರು

0

ಬಸ್ ಸಂಚಾರಕ್ಕೆ ಅಡ್ಡಿ ಆರೋಪ, ಕೇಸು ದಾಖಲು

ಕೆಎಸ್‌ಆರ್‌ಟಿಸಿ ಬಸ್‌ನ ಎದುರು ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.

ಜು.೨೫ ರಂದು ಬಳ್ಪದಿಂದ ಸುಬ್ರಹ್ಮಣ್ಯಕ್ಕೆ ಬರುವ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪ ವ್ಯಕ್ತವಾಗಿತ್ತು. ಘಟನೆಯ ವೀಡಿಯೋ ವೈರಲ್ ಆಗಿದ್ದು. ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಪಾಲಿಸಿದೇ ಬೈಕ್ ಚಲಾಯಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಅಲ್ಲದೇ ಬೈಕ್‌ನಲ್ಲಿದ್ದವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಅದಾಗಲೇ ಬಸ್‌ನಲ್ಲಿದ್ದವರು ಯುವಕರ ನಡೆಯನ್ನು ಪ್ರಶ್ನಿಸಿದ್ದರು. ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಭಾರತೀಯ ಮೋಟಾರ್ ಕಾಯ್ದೆ ೧೯೮೮ರ ಪ್ರಕಾರ ಪ್ರಕರಣ ದಾಖಲಾಗಿದ್ದು, ಯುವಕರನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.