ಅಮರ ಪಡ್ನೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿ ಭಾಷಾ ತರಗತಿಯನ್ನು ಅಮರ ಮೂಡ್ನೂರು ಗ್ರಾ.ಪಂ. ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿಯವರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಕುಕ್ಕುಜಡ್ಕ ಇದರ ಅಧ್ಯಕ್ಷರಾದ ಕೇಶವ ಗೌಡ ಕರ್ಮಜೆ ಇವರು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಕೊರತ್ಯಡ್ಕ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಈಶ್ವರ ಕಾಯರ, ಉಪಾಧ್ಯಕ್ಷರಾದ ಗೀತಾ ಎಂ ಕೆ, ಹಾಗೂ ಮುಖ್ಯೋಪಾಧ್ಯಾಯನಿ ಶ್ರೀಮತಿ ರೂಪಾಣಿ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ಶಿವಕುಮಾರ್ ಪೋಷಕರಿಗೆ ಸಚೇತನ ಕಾರ್ಯಕ್ರಮ ಹಾಗೂ ಬುನಾದಿ ಅಕ್ಷರ ಜ್ಞಾನ ಹಾಗೂ ಸಂಖ್ಯಾ ಜ್ಞಾನ ಪಾಠ ಆಧರಿತ ಮೌಲ್ಯಾಂಕನದ ಮಾಹಿತಿಯನ್ನು ನೀಡಿದರು. ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ರಮ್ಯಾ ಸ್ವಾಗತಿಸಿ, ಶ್ರೀಮತಿ ಗೀತಾ ಸಿಬಿ ವಂದಿಸಿದರು.