ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿ ಪಿ.ಬಿ.ಹರೀಶ್ ರೈ

0

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 50 ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿ‌ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದವರಾಗಿದ್ದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ ಅಧ್ಯಕ್ಷರಾಗಿದ್ದಾರೆ.