














ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಪೈಲಾರು ಮಾರ್ಗವಾಗಿ ಜಬಳೆ ಸಂಪರ್ಕದ ರಸ್ತೆಯಲ್ಲಿ ಕಳೆದ ರಾತ್ರಿ ಬೀಸಿದ ಗಾಳಿ ಮಳೆಗೆ ಮರ ರಸ್ತೆಯ ಮೇಲೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬೆಳಗ್ಗೆ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಮಾಡಬಾಕಿಲುರವರ ನೇತೃತ್ವದಲ್ಲಿ ಸ್ಥಳೀಯರಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ಮಾಡಲಾಗಿದ್ದು ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.










