ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆ. 8ರಂದು ನಡೆಯಲಿರುವ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜುಲೈ 27ರಂದು ದೇವಸ್ಥಾನದಲ್ಲಿ ನಡೆಯಿತು.
















ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ್ ಕಾಮತ್, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ಅಡ್ಡoತಡ್ಕ, ಅರ್ಚಕ ಶ್ರೀವರ ಪಾoಗಣ್ಣಾಯ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಸದಸ್ಯರು, ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು, ಊರಿನವರು ಉಪಸ್ಥಿತರಿದ್ದರು.











