ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿಗೆ ಪ್ರಶಸ್ತಿ

0

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಮಂಗಳೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2025 ಅನ್ನು ಜುಲೈ 23 ಮತ್ತು 24 ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಿತ್ತು. ಈ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧ ವೈದ್ಯಕೀಯ, ದಂತ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ಕಾಲೇಜುಗಳಿಂದ ೪೫ ಪುರುಷ ತಂಡಗಳು ಮತ್ತು ೨೭ ಮಹಿಳಾ ತಂಡಗಳು ಭಾಗವಹಿಸಿದ್ದವು.

ಈ ಪಂದ್ಯಾವಳಿಯಲ್ಲಿ ಕೆವಿಜಿ ವೈದ್ಯಕೀಯ ಕಾಲೇಜು ಮಹಿಳಾ ತಂಡವು 3 ನೇ ಸ್ಥಾನವನ್ನು ಪಡೆದುಕೊಂಡಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಹಾಗೂ ಕಾಲೇಜಿನ ಡೀನ್ ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂಧಿಸಿರುತ್ತಾರೆ.