ಮಾಜಿ ಸಚಿವರು ಹಾಗೂ ಉಡುಪಿಯ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ಜು.28 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ದೇವಳಕ್ಕೆ ಆಗಮಿಸಿದ ಇವರಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಸ್ವಾಗತಿಸಿ ದೇವಳದಿಂದ ವಿಶೇಷ ಗೌರವ ಸಲ್ಲಿಸಿದರು.















ಶ್ರೀ ದೇವರ ದರ್ಶನದ ಬಳಿಕ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭ ದೇವಸ್ಥಾನ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀಮತಿ ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಮತ್ತಿತರರು ಉಪಸ್ಥಿತರಿದ್ದರು.










