ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ
ಪ್ರಯುಕ್ತ ಇಂದು ವಿಶೇಷ ಪೂಜೆ ನಡೆಯಿತು.
















ನಾಗರ ಪಂಚಮಿ ಪ್ರಯುಕ್ತ ವಿವಿಧ ವೈದಿಕ ಕಾರ್ಯಗಳು ಇಂದು ನಡೆದಿದ್ದು ಆ ಪ್ರಯುಕ್ತ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ನಾಗ ತಂಬಿಲ ಸೇವೆ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ,
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾಮನಮೋಹನ್, ಶ್ರೀಮತಿ ಸೌಮ್ಯ ಭರತ್, ಶ್ರೀಮತಿ ಪ್ರವೀಣ ರೈ , ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ , ಪವನ್ ಎಂ.ಡಿ ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.











