








ಬಳ್ಪ ಸ.ಉ.ಹಿ.ಪ್ರಾ.ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮದ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜು.31 ರಂದು ನಡೆಯಿತು. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ ದೀಪ ಬೆಳಗಿಸಿ ಉದ್ಘಾಟಿಸಿದರು . ರಿಬ್ಬನ್ ಕತ್ತರಿಸುವ ಮೂಲಕ 1ನೇ ತರಗತಿಯ ವಿದ್ಯಾರ್ಥಿಗಳನ್ನು ಶಾಲೆಯ ಹಿರಿಯ ಶಿಕ್ಷಕಿಯರಾದ ಶ್ರೀಮತಿ ರುಕ್ಮಿಣಿ ಮತ್ತು ಶ್ರೀಮತಿ ಭಾಗೀರಥಿ ಎನ್ ಹಾಗೂ ನೆರೆದ ಎಲ್ಲ ಗಣ್ಯರು ತರಗತಿಗೆ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷ ಉಮೇಶ್ ಬುಡೆಂಗಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪನಾರಾಯಣ ಬಟ್ಟೋಡಿ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಸುಮಾಧರ ಕೋಡಿಬೈಲು, ದೈಹಿಕ ಶಿಕ್ಷಣ ನಿರ್ದೇಶಕ ತುಕರಾಮ ಏನೆಕಲ್,ಗ್ರಾಮ ವಿಕಾಸ ಪ್ರತಿಷ್ಟಾನದ ಅಧ್ಯಕ್ಷ ವಿನೋದ್ ಬೊಳ್ಮಲೆ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೋಹಿನಿ ಎ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮತ್ತು ಶಾಲಾ ಅಭಿವೃದ್ಧಿಯನ್ನು ಹೆಚ್ಚಿಸುವ ಕುರಿತು ಸಭೆ ನಡೆಸಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ 25,000ರೂನ್ನು ಶಾಲೆಯ ಅಭಿವೃದ್ಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ.ಯವರು,ಹಿರಿಯ ವಿದ್ಯಾರ್ಥಿಗಳು, ಪೋಷಕರು, ಪಂಚಾಯತ್ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು, ಊರ ವಿದ್ಯಾಭಿಮಾನಿಗಳು,
ಎಸ್.ಡಿ.ಎಂ.ಸಿ.ನಿಕಟಪೂರ್ವಾಧ್ಯಕ್ಷರು, ಶಾಲಾ ಶಿಕ್ಷಕ ವೃಂದ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಕೆ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಭವ್ಯ ವಂದಿಸಿದರು.ಸಹಶಿಕ್ಷಕ ಆನಂದ ವೈ.ಈ. ನಿರೂಪಿಸಿದರು.ಪೋಷಕರಾದ ಉಮೇಶ್ ಬಿ.ಗೋಪಾಲಕೃಷ್ಣ, ಮೀನಾಕ್ಷಿ ಮತ್ತು ಸ್ಥಳೀಯ ಗಣೇಶ್ ಸ್ಟೋರ್ ಮಾಲಕರು ಸಿಹಿತಿಂಡಿ ನೀಡಿ ಸಹಕರಿಸಿದರು.










