














ಶ್ರೀ ಶಾರದಾ ಪ್ರೌಢಶಾಲೆ ಸುಳ್ಯ ಇಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಸುಳ್ಯ ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಇವರು ವಿವರವಾಗಿ ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ. ಪಿ. ಇವರು ಸ್ವಾಗತಿಸಿ , ಮಾದಕ ದ್ರವ್ಯಗಳ ವ್ಯಸನವು ವಿದ್ಯಾರ್ಥಿಗಳ ಜೀವನಕ್ಕೆ ಮಾರಕ ಆದ್ದರಿಂದ ವಿದ್ಯಾರ್ಥಿಗಳು ಆರೋಗ್ಯಕರವಾದಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು . ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.










