ಎಐಸಿಸಿ ನಾಯಕರು ಕರ್ನಾಟಕದ ವಿಧಾನ ಪರಿಷತ್ ಸದಸ್ಯರು ಬಿ.ಕೆ. ಹರಿಪ್ರಸಾದ್‌ರವರ ಭೇಟಿ

0

ಎಐಸಿಸಿ ನಾಯಕರು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಬಿ.ಕೆ.ಹರಿಪ್ರಸಾದ್‌ರನ್ನು ಮಡಿಕೇರಿಯ ಸುದರ್ಶನ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಮುಖ್ಯಸಂಯೋಜಕರು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ಜಾನಿ ಕೆ.ಪಿ. ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಸುಳ್ಯದ ಧಾರ್ಮಿಕ ಸಾಮಾಜಿಕ ನಾಯಕ ಮಹಮ್ಮದ್ ಕುಂಞಿ ಗೂನಡ್ಕ, ದ.ಕ.ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ ,ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯ ವಸಂತ ಪೆಲ್ತಡ್ಕರವರು ಉಪಸ್ಥಿತರಿದ್ದರು.