














ದುಗ್ಗಲಡ್ಕದ ಶ್ರೀ ದುಗ್ಗಲಾಯ ಮಹಿಳಾ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆ.8 ರಂದು ಸಂಜೆ 6 ರಿಂದ ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ನಡೆಯಲಿದೆ.
ಅಂದು ಸಂಜೆ 6ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಆರಂಭ, ರಾತ್ರಿ 8.30ರಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಪ್ರಸಾದ ಭೋಜನ ನಡೆಯಲಿದೆ.
ಶ್ರೀ ದುಗ್ಗಲಾಯ ಮಹಿಳಾ ಸೇವಾ ಟ್ರಸ್ಟ್ ನ ವತಿಯಿಂದ ದುಗ್ಗಲಾಯ ದೈವಸ್ಥಾನ ಸಮಿತಿ ಮತ್ತು ದುಗ್ಗಲಾಯ ಯುವಸೇವಾ ಸಂಘದ ಸಹಕಾರದೊಂದಿಗೆ ನಡೆಯಲಿದ್ದು, ಭಕ್ತಾದಿಗಳು ಆಗಮಿಸಬೇಕೆಂದು ಅಧ್ಯಕ್ಷರು ಮತ್ತು ಸದಸ್ಯರು ವಿನಂತಿಸಿದ್ದಾರೆ.










