ಪಂಜ: ರೈತರಿಗೆ ಕೃಷಿ ಯಾಂತ್ರೀಕರಣ ವಿತರಣಾ ಕಾರ್ಯಕ್ರಮ

0

ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಯಂತ್ರೋಪಕರಣಗಳ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ರೈತರಿಗೆ ಕೃಷಿ ಯಾಂತ್ರೀಕರಣ ವಿತರಣಾ ಕಾರ್ಯಕ್ರಮ
(SMAM ಯೋಜನೆ) ಆ.2 ರಂದು ಪಂಜ ರೈತ ಸಂಪರ್ಕ ಕೇಂದ್ರದಲ್ಲಿ ನಡೆಯಿತು.

ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿದರು ಮತ್ತು ಕೃಷಿ ಯಾಂತ್ರೀಕರಣ ವಿತರಣೆ ಮಾಡಿದರು.
ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ , ಪುತ್ತೂರು ಉಪ ಕೃಷಿ ನಿರ್ದೇಶಕ ಶಿವಶಂಕರ ದಾನೆಗೊಂಡರ್ , ಮಂಗಳೂರು ಕೃಷಿ ವಿಜ್ಞಾನಿ ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಳ್ಯ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ.ಎಸ್. ಸ್ವಾಗತಿಸಿದರು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಸ್ಮಿತಾ ನಿರೂಪಿಸಿದರು.ಪಂಜ ಕೃಷಿ ಅಧಿಕಾರಿ ಯಶಸ್ ಮಂಜುನಾಥ ಎಂ ವಂದಿಸಿದರು. ಕೃಷಿ ಇಲಾಖೆಯ ಸಿಬ್ಬಂದಿ ವರ್ಗದವರು. ಕೃಷಿಕರು ಉಪಸ್ಥಿತರಿದ್ದರು.